ಚಿಕ್ಕಲ್ ಬೆಟ್ಟು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ: ನಿವೃತ್ತ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ದಂಪತಿಗೆ ಸನ್ಮಾನ

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 16 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಅಮಿತಾ ಉದಯ ಶೆಟ್ಟಿ ಅವರನ್ನು ಶಾಲೆಯಲ್ಲಿ ಆಯೋಜಿಸಿದ್ದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವ ಪೂಜಾರಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ ನಾಗರಾಜ್ ರಾವ್, ಮಾಜಿ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ಪ್ರೀತೇಶ್ ಶೆಟ್ಟಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ನಿವೃತ್ತ ಅಧ್ಯಾಪಕರಾದ ಜನಾರ್ಧನ ಹೆಗ್ಡೆ ಹೆಪ್ಪಳ, ನಿವೃತ್ತ ಮುಖ್ಯೋಪಾಧ್ಯಾಯರಾದ ಗೋವಿಂದ ಜೋಗಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ತಾರಾನಾಥ್ ಶೆಟ್ಟಿ, ದಿನೇಶ್ ಪೂಜಾರಿ, ಶ್ರೀಮತಿ ಭವ್ಯ, ಹಾಗೂ ಪ್ರಮುಖರಾದ ಜೀವಾನಂದ ಶೆಟ್ಟಿ ಯರ್ಲಪಾಡಿ, ಪ್ರಭಾಕರ ಹೆಗ್ಡೆ ಯರ್ಲಪಾಡಿ, ಮಹೇಶ್ ಶೆಟ್ಟಿ ಕಣಿಲ ಮತ್ತು ದಯಾನಂದ ಪ್ರಭು ಹೆಪ್ಪಳ ಉಪಸ್ಥಿತರಿದ್ದರು.
​ಶಾಲೆಯ ಶಿಕ್ಷಕಿ ಆಶಾ ಅವರು ವರದಿ ವಾಚಿಸಿದರು. ಶಿಕ್ಷಕ ವಿಜಯ ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕಿ ಸ್ನೇಹ ಧನ್ಯವಾದ ಅರ್ಪಿಸಿದರು ಮತ್ತು ಶಾಲೆಯ ಮುಖ್ಯೋಪಾಧ್ಯಾಯಿನಿ ಅಶ್ವಿನಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು

Leave a Reply

Your email address will not be published. Required fields are marked *