ಮಂಗಳೂರು: ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಮಂಗಳೂರು ಮಹಾನಗರ ಪಾಲಿಕೆಯ ತಮ್ಮ ಶಾಸಕರ ಕಛೇರಿಯಲ್ಲಿ (SIR) ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಜೂನ್ 15 ರಂದು ಪ್ರಾರಂಭಿಸಲಾಯಿತು.

ಮಂಗಳೂರು ದಕ್ಷಿಣ ವಿಧಾನ ಸಭಾ ಕೇತ್ರಕ್ಕೆ ಸಂಬಂಧಪಟ್ಟಂತೆ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಪ್ಪಿಸಿಕೊಳ್ಳದಂತೆ, ಮತ್ತು ಸರಿಯಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡಿ ಖಾತ್ರಿ ಪಡಿಸಿಕೊಳ್ಳಲು ಸಹಾಯವಾಣಿ ಕೇಂದ್ರವು ಪ್ರಾರಂಭವಾಗಿದೆ.ಈ ಸಹಾಯವಾಣಿ ಮೊಬೈಲ್ ಸಂಖ್ಯೆ:.8217865120 ಈ ನಂಬರನ್ನು ಸಂಪರ್ಕಿಸಿದಲ್ಲಿ ಸಂಪೂರ್ಣ ಮಾಹಿತಿಯೊಂದಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಲು ಸಹಾಯ ಮಾಡಲಾಗುವುದು ಎಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮಾತನಾಡಿ ಅನೇಕ ಕಡೆಗಳಲ್ಲಿ SIR ಬಗ್ಗೆ ಜನರಿಗೆ ಮಾಹಿತಿಯ ಕೊರತೆ ಇದ್ದು ಈ ರೀತಿ ಮಾಹಿತಿಯನ್ನು ನೀಡಿದಲ್ಲಿ ಸಾರ್ವಜನಿಕರ ಗೊಂದಲಗಳು ದೂರವಾಗುವುದು ಹಾಗೂ ಈ ಸಹಾಯಕೇಂದ್ರದ ಸದುಪಯೋಗವನ್ನು ಪಡೆಯಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯಿಲಿ, ನವೀನ್ ಡಿʼಸೋಜಾ, ಪದ್ಮನಾಭ ಪಣಿಕ್ಕರ್, ಪ್ರಕಾಶ್ ಬಿ ಸಾಲ್ಯಾನ್, ಸತೀಶ್ ಪೆಂಗಲ್ ಅಬ್ದುಲ್ ಸಲೀಂ, ಚೇತನ್ ಕುಮಾರ್, ಮನಿಷ್ ಬೋಳಾರ್, ಬಶೀರ್ ಅಹಮಮದ್ ಮುಂತಾದವರು ಉಪಸ್ಥಿತರಿದ್ದರು.
