ನವದೆಹಲಿ: ಜೂನ್ 29 ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ರಾದ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ನೆರವೇರಿತು.



ಈ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷರಾದ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ರಾಧಾ ಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯರಾದ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯಗಳನ್ನು ಕೋರಿದರು.
