ಬೆಳ್ತಂಗಡಿ ಹೊಸ ಪಟ್ಲ ಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಹೊಸ ಪಟ್ಲ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಮಾಹಿತಿ ಕಾರ್ಯಕ್ರಮ ಜುಲೈ 22ರಂದು ನಡೆಯಿತು.

ಮಾಹಿತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮೂಡುಬಿದಿರೆಯ ಪತ್ರಕರ್ತ, ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜ ಕುಮಾರ್ ಆಗಮಿಸಿದ್ದರು.
ಅವರು, ವಿದ್ಯಾರ್ಥಿಗಳು ವಿವಿಧ ಪರೀಕ್ಷೆಗಳಿಗೆ ಭಾಗವಹಿಸಿ ತನ್ಮೂಲಕ ಸರಕಾರದಿಂದ ಉಚಿತವಾಗಿ ದೊರಕುವ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಮಾಹಿತಿಗಳನ್ನು ಒದಗಿಸಿದರು. ತಮ್ಮ ಸುತ್ತಲಿನ ಪರಿಸರವನ್ನು ಶುದ್ಧ ಹಾಗೂ ಸ್ವಚ್ಛವಾಗಿ ಇಟ್ಟುಕೊಳ್ಳಲು ಬೇಕಾದ ಪೂರಕ ಮಾಹಿತಿಯನ್ನು ಕೂಡ ಈ ಸಂದರ್ಭದಲ್ಲಿ ನೀಡಿದರು.
ಮುಖ್ಯ ಶಿಕ್ಷಕಿ ವಿದ್ಯಾ ಪೈ ಕೆ ಅಧ್ಯಕ್ಷತೆ ವಹಿಸಿದ್ದರು. ಪ್ರಮೀಳಾ ಸ್ವಾಗತಿಸಿದರು. ಚೈತ್ರ ವಂದಿಸಿದರು. ಶಶಿಕಲಾ ಸಹಕರಿಸಿದರು.

Leave a Reply

Your email address will not be published. Required fields are marked *