ಕ್ರೈಸ್ಟ್ ಕಿಂಗ್: 77ನೇ ಗಣರಾಜ್ಯೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಕಳದ ಖ್ಯಾತ ಉದ್ಯಮಿ ವಿವೇಕಾನಂದ ಶೆಣೈ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಸಿದರು. ನಂತರ ಮಾತನಾಡಿದ ಅವರು “ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಬಹಳಷ್ಟು ಬಲಿಷ್ಠವಾದ ರಾಷ್ಟ್ರವಾಗಿದೆ ಹಾಗೂ ಜನರ ಪಾಲ್ಗೊಳ್ಳುವಿಕೆಯಿಂದ ಪ್ರಜಾಪ್ರಭುತ್ವ ಇನ್ನಷ್ಟು ಬಲ ಪಡೆಯುತ್ತದೆ” ಎಂದು ಹೇಳಿದರು ಎಂಟನೇ ತರಗತಿಯ ವಿದ್ಯಾರ್ಥಿನಿ ದಿಯಾ ಶೆಟ್ಟಿ ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕಿ ರಮಿತಾ ಶೆಟ್ಟಿ ಗಣರಾಜ್ಯೋತ್ಸವದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಮುಖ್ಯ ಶಿಕ್ಷಕಿಯಾದ ಪ್ರೌಢಶಾಲಾ ವಿಭಾಗದ ಜೋಸ್ನ ಸ್ನೇಹಲತಾ, ಪ್ರಾಥಮಿಕ ವಿಭಾಗದ ರುಡಾಲ್ಫ್ ಕಿಶೋರ್ ಲೋಬೊ, ಸಂಸ್ಥೆಯ ಆಪ್ತ ಸಮಾಲೋಚಕಿಯಾದ ಡಾ.ಸಿ. ಶಾಲೆಟ್ ಸೀಕ್ವೇರಾ, ಸಂಸ್ಥೆಯ ಆಡಳಿತಾಧಿಕಾರಿಯಾದ ಕಿರಣ್ ಕ್ರಾಸ್ತ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಶಿಕ್ಷಕಿಯಾದ ವಿಜೇತಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *