ಕ್ರೈಸ್ಟ್ ಕಿಂಗ್ ಪ್ರಾಥಮಿಕ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆ ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಏಳನೇ ತರಗತಿಯ ಡೆಲ್ಸಿಯಾ ಡಿಸೋಜ, ಸಾಚಿ ಎಸ್ ಸುವರ್ಣ, ಅಂಜನಿ ಕಾಮತ್ ಮತ್ತು ಮಾನ್ವಿತ ಕೆ ಪೂಜಾರಿ ತಂಡದ ಸದಸ್ಯರಾಗಿದ್ದರು.

Leave a Reply

Your email address will not be published. Required fields are marked *