ಶಟಲ್‌ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಣಶ್ರೀ ವಿದ್ಯಾಸಂಸ್ಥೆಯ ಕುಶಾಂತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಬಂಟ್ವಾಳ, ಸಿದ್ದಕಟ್ಟೆ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಛೇರಿ ಬಂಟ್ವಾಳ, ಹಾಗೂ ಎಸ್ ವಿ ಎಸ್ ಪ್ರಾಥಮಿಕ ಶಾಲೆ ಪಾಣೆಮಂಗಳೂರು ಇವರ ಸಹಯೋಗದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಣಶ್ರೀ ವಿದ್ಯಾಸಂಸ್ಥೆಯ ಎಂಟನೆಯ ತರಗತಿಯ ವಿದ್ಯಾರ್ಥಿ “ಕುಶಾಂತ್ ” ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಕೂಟಕ್ಕೆ ಯಾಗಿರುತ್ತಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಗುಣಶ್ರೀ ವಿದ್ಯಾಸಂಸ್ಥೆಯ ಅಧ್ಯಕ್ಷರು, ಸಂಚಾಲಕರು, ಪ್ರಾಂಶುಪಾಲರು ಮುಖ್ಯಶಿಕ್ಷಕಿಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

Leave a Reply

Your email address will not be published. Required fields are marked *