ಮಂಗಳೂರು: ಕಾಂಗ್ರೆಸ್ ನಾಯಕರು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ BJP ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ಆಕ್ಷೇಪಾರ್ಹ ಹಾಗೂ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನಾ ಸಭೆಯನ್ನು ಇಂದು ಶನಿವಾರ ಮಂಗಳೂರಿನ ಪುರಭವನ ಮುಂಭಾಗದ ರಾಜಾಜಿ ಪಾರ್ಕ್ ವಲಯದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಆಯೋಜಿಸಲಾಯಿತು.













ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸರ್ಕಾರಿ ನಾಮನಿರ್ದೇಶಿತ ಅಧ್ಯಕ್ಷರು ಮತ್ತು ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಮತ್ತು ಅಭ್ಯರ್ಥಿಗಳು, ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಲಾಯಿತು.
