ಉಡುಪಿ: ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ ಖಾದರ್ ಫರೀದ್ ಅವರು ಕಾಪು ಲೈಟ್ ಹೌಸ್ ನ ಕಡಲಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಮುಖಂಡ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
