ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ್. ಹೆಚ್ ಉದ್ಘಾಟಿಸಿ, ದೇಶದಲ್ಲಿರುವ ಲಿಂಗ ತಾರತಮ್ಯ, ಹೆಣ್ಣು ಮಕ್ಕಳ ಶಿಕ್ಷಣದ ಅರಿವು, ಹೆಣ್ಣು ಮಕ್ಕಳನ್ನು ಉಳಿಸಿ ಬೆಳೆಸಿ ಪೋಷಿಸುವ ಬಗ್ಗೆ ಮಾಹಿತಿ ನೀಡಿದರು.

ಪ್ರಸೂತಿ ತಜ್ಞೆ ಡಾ. ಕವಿತಾ ಮತ್ತು ಮಕ್ಕಳ ತಜ್ಞ ಡಾ. ಅಮರನಾಥ್ ಶಾಸ್ತ್ರೀ ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸಂದೀಪ್, ಪ್ರಸೂತಿ ತಜ್ಞೆ ಡಾ. ಐಶ್ವರ್ಯ, ಶುಶ್ರೂಷಕಧೀಕ್ಷಕಿ ಪ್ಲೋರಾ ಡಿ’ಆಲ್ಮೇಡ, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಬಾಣಂತಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ಜನಿಸಿದ ಮೂರು ನವಜಾತ ಶಿಶುಗಳಿಗೆ ಕಿಟ್‍ನ್ನು ವಿತರಿಸಲಾಯಿತು.
ಆಪ್ತಸಮಾಲೋಚಕಿ ವಿದ್ಯಾ ಸುವರ್ಣ ನಿರೂಪಿಸಿ, ಶುಶ್ರೂಷಕಾಧಿಕಾರಿ ರೇಣುಕ ವಂದಿಸಿದರು.
