ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮುಂಡಾಲ ಮಹಾಸಭಾ ವತಿಯಿಂದ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಮುಂಡಾಲ ಸಮುದಾಯದ ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ ಸೆ. 6ರಂದು ಬೆಳಗ್ಗೆ 11.30ಕ್ಕೆ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣ ಲಾಲ್‌ಬಾಗ್‌ನಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಧ್ಯಕ್ಷ ಶಿವಪ್ಪ ನಂತೂರು ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಚೂರು ಮಾಲ್ತಿದೇವಿ ದೇವಸ್ಥಾನದ ಧರ್ಮದರ್ಶಿ ಹಾಗೂ ಮಾಲ್ತಿದೇವಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋಕುಲ್‌ದಾಸ್ ಬಾರ್ಕೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಚಿತ್ರದುರ್ಗದ ಶ್ರೀ ಆದಿಜಾಂಬವ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ತಾವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವುದಾಗಿ ತಿಳಿಸಿದರು.
ಅಂದು ಬೆಳಗ್ಗೆ ನಂತೂರಿನಲ್ಲಿ ಮುಂಡಾಲ ಮಹಾಸಭಾದ ಜಿಲ್ಲಾ ಕಚೇರಿಯನ್ನು ಸಂತೋಷ್ ಕುಮಾರ್ ಬಟ್ಟೆ ಉದ್ಘಾಟಿಸಲಿದ್ದು, ಮೆರವಣಿಗೆಗೆ ಮಹಾಸಭಾದ ಗೌರವಾಧ್ಯಕ್ಷ ಟಿ. ಸದಾಶಿವ ಕುಂದರ್ ಹಾಗೂ ವೆಂಕಟೇಶ ಅಶೋಕನಗರ ಚಾಲನೆ ನೀಡಲಿದ್ದಾರೆ. ಹರೀಶ್ ಜೆ. ಕೊಲಕಾಡಿ, ಬೆಂಗಳೂರು ಅವರು ಲಾಂಛನ ಅನಾವರಣಗೊಳಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಹರಿಯಪ್ಪ, ಜನಾರ್ದನ ಬಿಜೈ, ಗೌರವಾಧ್ಯಕ್ಷ ಸದಾಶಿವ ಟಿ., ಕೋಶಾಧಿಕಾರಿ ಶಶಿಕಾಂತ್ ಉಳ್ಳಾಲ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ವಿನೋದ್ ಆಳ್ವ ಉಪಸ್ಥಿತರಿದ್ದರು.
