ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನ ಈ ವರ್ಷದ ಶಿಕ್ಷಕರತ್ನ ಮತ್ತು ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

ಕಾರ್ಕಳ: ಪ್ರತಿಷ್ಟಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ಹಾಗೂ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನವರು ಕೊಡಮಾಡುವ ಪ್ರಶಸ್ತಿಗಳಾದ ಕ್ರೈಸ್ಟ್ ಕಿಂಗ್ ಶಿಕ್ಷಕ ರತ್ನ ಹಾಗೂ ಕ್ರೈಸ್ಟ್ ಕಿಂಗ್ ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆಯ ವಿಜ್ಞಾನ ಶಿಕ್ಷಕ ಬಾಲಕೃಷ್ಣ ನಾಯಕ್ ಇವರು ಈ ಸಾಲಿನ ‘ಕ್ರೈಸ್ಟ್ ಕಿಂಗ್ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅದೇ ರೀತಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕೊಡಮಾಡುವ ‘ಕ್ರೈಸ್ಟ್ ಕಿಂಗ್ ಕ್ರೀಡಾ ಶಿಕ್ಷಕಶ್ರೀ’ ಪ್ರಶಸ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಆನಂದ ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ನವೆಂಬರ್ 5ರಂದು ಸಂಸ್ಥೆಯಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *