ಮಂಗಳೂರಿನ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಪೂಜಿಸಲ್ಪಡುವ ಶಾರದಾ ಮಾತೆಯ ಭವ್ಯ ಮೂರ್ತಿ ರಚನೆಗೆ ಗಣೇಶ ಚತುರ್ಥಿಯ ಪವಿತ್ರ ದಿನದಂದು ವಿಧ್ಯುಕ್ತವಾಗಿ ಮುಹೂರ್ತ ನೆರವೇರಿತು.

ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ ಕಾವೂರು, ಉಪಾಧ್ಯಕ್ಷ ಜಯರಾಮ ಕಾರಂದೂರು, ಗೋಕರ್ಣನಾಥ ಸೇವಾದಳ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದು ಪ್ರಾರ್ಥನೆ ಸಲ್ಲಿಸಿದರು.
