ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಕ್ರಿಯೇಟಿವ್ ಗ್ಲೋಬಲ್ ಶಾಲೆ, ಹಿರ್ಗಾನ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕರ ವಿಭಾಗ ಹಾಗೂ ಬಾಲಕಿಯರ ವಿಭಾಗಗಳ ಕರಾಟೆ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಸುದೀಕ್ಷಾ ಪೂಜಾರಿ ಹಾಗೂ ಎಂಟನೇ ತರಗತಿಯ ಅಕ್ಷಯ್ ಪ್ರಭು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಪಂದ್ಯಾಟವು ರಾಮನಗರ ಜಿಲ್ಲೆಯಲ್ಲಿ ನಡೆಯಲಿದ್ದು ಕ್ರೈಸ್ಟ್ ಕಿಂಗ್ ಸಂಸ್ಥೆಯ ಈ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕರಾಟೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
