ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ

ಉಡುಪಿ: ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಡೆಸಲಿರುವ ಸಭೆಯ ಕುರಿತು ಮಂಗಳವಾರ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ, ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಶಾಸಕರಾದ ಯಶ್‍ಪಾಲ್ ಎ ಸುವರ್ಣ ಹಾಗೂ ಸುನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡ ಪ್ರಸಾದ್ ರಾಜ್ ಕಾಂಚನ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಎಫ್.ಓ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *