ಏಶ್ಯಾಡ್ ನಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ನವರಿಗೆ ದಕ್ಷಿಣ ಕನ್ನಡ ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರಿಂದ ಅಭಿನಂದನೆ

ಮಂಗಳೂರು: ಕೇಂದ್ರದಲ್ಲಿ ಬಿ.ಜೆ.ಪಿ. ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಬಂದ ಬಳಿಕ ದೇಶದ ಕ್ರೀಡಾಳುಗಳು ಕ್ರೀಡಾ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಸಾಧನೆಗೈಯುತ್ತಿರುವುದು ಶ್ಲಾಘನೀಯ ಮತ್ತು ಕೇಂದ್ರ ಸರ್ಕಾರ ಇದಕ್ಕಾಗಿ ವಿಶೇಷ ವಾದ ಪ್ರಯತ್ನಗಳನ್ನು ಮಾಡುತ್ತಿದೆ.

ಪ್ರಸ್ತುತ ನಡೆಯುತ್ತಿರುವ ಏಶ್ಯಾಡ್ ನಲ್ಲಿ ಭಾರತ ಚಿನ್ನದ ಪದಕಗಳನ್ನು ಪಡೆಯುತ್ತಿದೆ. ನಮ್ಮ ಜಿಲ್ಲೆಯವರಾಗಿಯೇ ನೆಲೆಸಿರುವ ಪೂವಮ್ಮ ನವರ ಸಾಧನೆ ನಮಗೆಲ್ಲರಿಗೂ ಹೆಮ್ಮೆ. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿಯ ವತಿಯಿಂದ ದಕ್ಷಿಣ ಕನ್ನಡ ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಅವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಜತೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಉಪಸ್ಥಿತರಿದ್ದರು.
‌

ಈ ಸಂಧರ್ಭದಲ್ಲಿ ಬಿ.ಜೆ.ಪಿ. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗಡೆ, ಕಾರ್ಯದರ್ಶಿ ಅಮಿತ್ ರಾಜ್, ಜಿಲ್ಲಾ ಮಾಧ್ಯಮ ಪ್ರಮುಖ್ ವಸಂತ್ ಜೆ.ಪೂಜಾರಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಮುಖ್ ಅಕ್ಷಯ್ ಆಳ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ರಾಹುಲ್ ಶೆಟ್ಟಿ ಮತ್ತಿತರರು ಜತೆಯಲ್ಲಿದ್ದರು.

Leave a Reply

Your email address will not be published. Required fields are marked *