ಎಚ್.ಐ.ವಿ/ ಏಡ್ಸ್ ಜಾಗೃತರಾಗಿಸುವ ಉದ್ದೇಶದಿಂದ ಜಿಲ್ಲಾಮಟ್ಟದ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆ

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ವತಿಯಿಂದ ಎಚ್.ಐ.ವಿ/ ಏಡ್ಸ್ ಬಗ್ಗೆ ಅರಿವು ಮೂಡಿಸಿ ಜಾಗೃತರಾಗಿಸುವ ಉದ್ದೇಶದಿಂದ ಜಿಲ್ಲಾಮಟ್ಟದ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು 17 ರಿಂದ 25 ವರ್ಷ ವಯಸ್ಸಿನೊಳಗಿನ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮಂಗಳ ಸ್ಟೇಡಿಯಂ, ಲೇಡಿಹಿಲ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಮ್ಯಾರಥಾನ್ ಸ್ಪರ್ಧೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್ ಆರ್ ತಿಮ್ಮಯ್ಯ ಹಸಿರು ನಿಶಾನೆ ಬಾವುಟ ತೋರಿಸುವುದರ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.

ಸುಮಾರು 120 ಸ್ಪರ್ಧಿಗಳು ಭಾಗವಹಿಸಿದ ಈ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಎಸ್.ಡಿ.ಎಂ ಕಾಲೇಜಿನ ರಂಗಣ್ಣ ನಾಯ್ಕ ಪ್ರಥಮ ಸ್ಥಾನ, ಮಹಿಳಾ ವಿಭಾಗದಲ್ಲಿ ಶ್ರೀದೇವಿ ಕಾಲೇಜಿನ ಶ್ರೇಯ ಎಂ. ಪ್ರಥಮ ಸ್ಥಾನಪಡೆದುಕೊಂಡಿದ್ದಾರೆ.
ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ದಾಳುಗಳಿಗೆ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಖತೀಜ ದಿಲ್‍ಶಾದ್ ಎಂ.ಪಿ ಇವರು ಪ್ರಶಸ್ತಿ ಪ್ರಧಾನ ಮಾಡಿದರು.
ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸುಜಯ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಎಲ್ಲಾ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *