ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಲಯ ಮಟ್ಟದ NSS ಅಂತರ್ ಕಾಲೇಜು ನೃತ್ಯ ಸ್ಪರ್ಧೆ

ಪುತ್ತೂರು: ಪುತ್ತೂರಿನ ಸ೦ತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ವಲಯ ಮಟ್ಟದ ಅಂತರ್ ಕಾಲೇಜು ವೈಯಕ್ತಿಕ ಮತ್ತು ಗುಂಪು ನೃತ್ಯ ಸ್ಪರ್ಧೆಯನ್ನು ಅಕ್ಟೋಬರ್ 15ರಂದು ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೊ ಅಧ್ಯಕ್ಷತೆ ವಹಿಸಿ, NSS‌ನ ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿಯ ಅಗತ್ಯತೆಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ನಾಯಕತ್ವ, ಸಂವಹನ, ಸಹಕಾರ ಮತ್ತು ಸಾಮಾಜಿಕ ಸೇವೆಯಂತಹ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು. NSS ಅಧಿಕಾರಿಯಾದ ಡಾ| ಕೆ. ಚಂದ್ರಶೇಖರ್ ರವರು NSS ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವೈಯಕ್ತಿಕ ಮತ್ತು ಗುಂಪು ನೃತ್ಯ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವವನ್ನು ಬೆಳೆಸಲು ಉತ್ತಮ ವೇದಿಕೆಯಾಯಿತು.ಘಟಕ ನಾಯಕಿ ಶಿಲ್ಪ ಸ್ವಾಗತಿಸಿ, ಅಂತಿಮ ಬಿಕಾಂ. ವಿದ್ಯಾರ್ಥಿನಿ ಲವಿಕಾ ವಂದನಾರ್ಪಣೆ ಮಾಡಿದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಸೌಜನ್ಯ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *