ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ವಿವೇಕಾನಂದ ಪಿಯು ಕಾಲೇಜು ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 19 ಹಾಗೂ 17ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.

ಬಾಲಕರ ವಿಭಾಗ
ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು ಸೋಲಿಸಿ 19ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಓಟಗಾರ ಪ್ರಶಸ್ತಿಯನ್ನು ಆಳ್ವಾಸ್ನ ವಿಜಯ್ ಕುಮಾರ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್ನ ಚೇತನ್ ಕೆ ಪಿ ಪಡೆದರು.
ಬಾಲಕಿಯರ ವಿಭಾಗ
ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್ ಡಿ ಪಿ ಟಿ ಪಿಯು ಕಾಲೇಜು ಕಟೀಲು ತಂಡವನ್ನು ಸೋಲಿಸಿ 17ನೇ ಬಾರಿ ಜಯಶಾಲಿಯಾಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಓಟಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ವಿಜಯಲಕ್ಷ್ಮೀ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್ನ ಲಾವಣ್ಯ ಪಡೆದರು.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.
