ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 7.55 ಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿü ಜಿಲ್ಲಾ ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ.

Leave a Reply

Your email address will not be published. Required fields are marked *