ಉಡುಪಿ: ವಿದ್ಯಾರತ್ನ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

ಉಡುಪಿ: ಪ್ರಥಮ ಚಿಕಿತ್ಸೆಯ ಕುರಿತಾದ ಅರಿವು ಸಂಕಷ್ಟದ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಇತರರು ಕಷ್ಟದಲ್ಲಿದ್ದಾಗ ಸಹಾಯ ಮಾಡಲು ಸಹಕಾರಿಯಾಗುತ್ತದೆ. ಪ್ರಥಮ ಚಿಕಿತ್ಸೆಯ ಪ್ರಾಥಮಿಕ ಅರಿವು ಎಲ್ಲರಿಗೂ ಮುಖ್ಯ ಎಂದು ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.

ಅವರು ಉಡುಪಿಯ ವಿದ್ಯಾರತ್ನ ನರ್ಸಿಂಗ್ ಕಾಲೇಜಿನಲ್ಲಿ ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆ ಮತ್ತು ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲೆ ಅನಿತಾ ಸಿ. ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ. ಎ.ವಿ. ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಹಾಗೂ ಖ್ಯಾತ ಮೂಳೆ ತಜ್ಞ ಡಾ. ಸುರೇಶ್ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ನರ್ಸಿಂಗ್ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಸಹಾಯಕ ಪ್ರಾಧ್ಯಾಪಕಿ ಪ್ರೀತಿ ಫೆರ್ನಾಂಡಿಸ್ ಸ್ವಾಗತಿಸಿ, ಮೆರಿಟಾ ಮೆಂಡೋನ್ಸಾ ವಂದಿಸಿದರು.
ಉಪಪ್ರಾಂಶುಪಾಲ ಡಾ. ರಮೇಶ್ ಎಂ. ಕೆ., ಆಡಳಿತಾಧಿಕಾರಿ ಡಾ. ರವಿ ಪಾಲನ್ ಸಿಟಿ ಆಸ್ವತ್ರೆಯ ನರ್ಸಿಂಗ್ ಸುಪರಿಟೆಂಟ್ ಮರಿಯಾ ಆಳ್ವ, ಮಾಲಿನಿ ಮೆರಿಟ ಕುಂದರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *