ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ. ಕ್ರಿಸ್ಟೋಫರ್ ಕೋಟ್ಯಾನ್‍ರವರು ಮಾತನಾಡಿ “ಹಲವಾರು ಜಾತಿ, ಧರ್ಮ, ಪಂಗಡಗಳ ಜನರು ಕರ್ನಾಟಕದಲ್ಲಿ ವಾಸ ಮಾಡಿಕೊಂಡಿದ್ದರೂ ಕೂಡಾ ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮಲ್ಲಿದ್ದು ಪರಸ್ಪರ ಕೋಮು ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಇದೇ ನಮ್ಮ ನಾಡಿನ ವಿಶೇಷತೆಯಾಗಿದೆ” ಎಂದು ಹೇಳಿದರು. ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಜೋಸ್ನಾ ಸ್ನೇಹಲತಾ, ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಸಿಸ್ಟರ್ ಜಾಲಿ ಜೇಕಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ರೇಖಾ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *