ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯವರಾದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ತುಳು ಸಂಶೋಧಕಿ ಹಾಗೂ ಲೇಖಕಿ ಡಾ. ಇಂದಿರಾ ಹೆಗ್ಡೆ, ಮಾಧ್ಯಮ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.



ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್. ತಂಗಡಗಿ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
