ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕಿಯರ ಖೋ-ಖೋ ಪಂದ್ಯಾಟ; ಆಳ್ವಾಸ್‍ಗೆ ಪ.ಪೂ ಕಾಲೇಜಿನ ಬಾಲಕಿಯರು ಚಾಂಪಿಯನ್

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆ ಹಾಗೂ ಸಿಆರ್‍ಆರ್ ಪದವಿಪೂರ್ವ ಕಾಲೇಜು ದೊಡ್ಡಕನ್ನಲ್ಲಿ, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಬಾಲಕಿಯರ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು.

ಬಾಲಕಿಯರ ವಿಭಾಗ
ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಮಂಡ್ಯ ಜಿಲ್ಲೆಯನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಲಾವಣ್ಯ ಹಾಗೂ ಉತ್ತಮ ಓಟಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್‍ನ ವಿಜಯಲಕ್ಷ್ಮೀ ಪಡೆದರು.

ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *