ಮಂಗಳೂರು: ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಭವಿತಾ ಡಿ’ಸೋಜಾ ಅವರನ್ನು ಸೊಸೈಟಿಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರು ಸೊಸೈಟಿಯ ಆಡಳಿತ ಮಂಡಳಿಯ ಸಭೆಯ ಸಂದರ್ಭದಲ್ಲಿ ಭವಿತಾ ಡಿ’ಸೋಜಾ ಅವರ ಸಾಧನೆಯನ್ನು ಶ್ಲಾಘಿಸಿ, ಅಭಿನಂದಿಸಿ ಸನ್ಮಾನಿಸಿದರು. ಅವರ ಸಾಧನೆಯು ಇತರ ಮಹಿಳೆಯರಿಗೂ ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಸಿರಿಲ್ ಡಿ’ಸೋಜಾ, ನಿರ್ದೇಶಕರಾದ ಜೇಮ್ಸ್ ಮಾಡ್ತಾ, ರಾಜೇಶ್, ಭಾಸ್ಕರ್ ರಾವ್, ಶೇಖರ್, ವಿದ್ಯಾ ತೋರಸ್, ಅನಿಲ್ ಹಾಗೂ ಸೊಸೈಟಿಯ ಕಾರ್ಯದರ್ಶಿ ನಿಶಿತಾ ಉಪಸ್ಥಿತರಿದ್ದು, ಭವಿತಾ ಡಿ’ಸೋಜಾ ಅವರಿಗೆ ಅಭಿನಂದನೆ ಸಲ್ಲಿಸಿದರು.
