ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ-2026 ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2026ರ ಕ್ಯಾಲೆಂಡರ್ ವರ್ಷದಲ್ಲಿ (2026 ಜನವರಿ 1 ರಿಂದ ಡಿಸೆಂಬರ್ 31) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ/ ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/-ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು
ಒಳಗೊಂಡಿದೆ.

ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ -2026 ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‌ಭಾಗ್, ಮಂಗಳೂರು 575003, ಇವರಿಗೆ ದಿನಾಂಕ 31-12-2026 ರ ಸಂಜೆ 5.00 ಘಂಟೆಯ ಒಳಗೆ ಕಳುಹಿಸಿಕೊಡುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *