ನ. 16 ರಂದು ತುಳುವಿನಿಂದ ಇಂಗ್ಲೀಷ್ ಗೆ ಅನುವಾದಿಸಲಾದ ಜನಪದ  ಕತೆಗಳ ಪುಸ್ತಕ ಬಿಡುಗಡೆ

ಮಂಗಳೂರು: ತುಳುವಿನಿಂದ ಇಂಗ್ಲೀಷ್ ಗೆ ಅನುವಾದಿಸಲಾದ ತುಳುನಾಡಿನ ಜನಪದ ಕಥೆಗಳ ಸರಣಿಯ ಐದು ಕೃತಿಗಳ ಬಿಡುಗಡೆ ಸಮಾರಂಭವು ನ.16 ರ ಮಧ್ಯಾಹ್ನ  12.30ಕ್ಕೆ ಪಾದುವ ಆಡಿಟೋರಿಯಂನಲ್ಲಿ  ನಡೆಯಲಿದೆ.

ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರಿನ ಸ್ಥಾಪಕಾಧ್ಯಕ್ಷ ಗಣೇಶ್ ಎಸ್ ರಾವ್ ಕೃತಿಗಳನ್ನು ಬಿಡುಗಡೆಗೊಳಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಸ್ತಾವನೆ ಮಾಡುವರು.

ಪಾದುವ ಕಾಲೇಜ್ ಆಫ್ ಕಾಮರ್ಸ್ ಅಂಡ್  ಮ್ಯಾನೆಜ್ಮೆಂಟ್ ನ ಪ್ರಾಂಶುಪಾಲರಾದ ವಂದನೀಯ ಅರುಣ್ ವಿಲ್ಸನ್ ಲೋಬೋ  ಈ  ಕಾರ್ಯಕ್ರಮದ ಅಧ್ಯಕ್ಷತೆ  ವಹಿಸುವರು.

ಪಾದುವ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರೊಸಿನ್ ಫ್ಲಾರೆನ್ಸ್ ಡಿಸೋ’ಜ, ಪಾದುವ ಶಾಲಾ ಪೋಷಕರ-ಶಿಕ್ಷಕರ ಸಂಘದ ಅಧ್ಯಕ್ಷೆ ಮಮತಾ, ವಿದ್ಯಾರ್ಥಿ ಪ್ರತಿನಿಧಿ ವೈಷ್ಣವಿ, ಅಕಾಡೆಮಿಯ ಸದಸ್ಯೆ ಅಕ್ಷಯ ಆರ್ ಶೆಟ್ಟಿ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *