ರಾಜ್ಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜನಿಟ ವೆಲಿಕ ಡಿಸೋಜಾ ಸಾಧನೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಬಿಟೆಕ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜಾ ಅವರು ಕರ್ನಾಟಕ ರಾಜ್ಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. 18 ವರ್ಷ ಮೇಲ್ಪಟ್ಟವರ ಕ್ವಾಡ್ ವಿಭಾಗದಲ್ಲಿ ಸ್ಪರ್ಧಿಸಿದ ಅವರು ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗೆದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಈ ಅತ್ಯುತ್ತಮ ಪ್ರದರ್ಶನದ ಫಲವಾಗಿ ಜನಿಟ ಅವರು ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ.
ಇವರು ಆಗ್ನೆಲೊ ಡಿಸೋಜಾ ಹಾಗೂ ಜೆಸಿಂತಾ ರೋಸ್ ಡಿಸೋಜಾ ದಂಪತಿಯ ಪುತ್ರಿಯಾಗಿರುತ್ತಾರೆ. ಮನೀಶ್ ಬಂಗೇರ ಹಾಗೂ ಕಿಶೋರ್ ಕುಮಾರ್ ಅವರು ಇವರಿಗೆ ತರಬೇತಿ ನೀಡಿದ್ದಾರೆ.

Leave a Reply

Your email address will not be published. Required fields are marked *