ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವಾ ಇಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ಸಡಗರ ಹಾಗೂ
ಸಂಭ್ರಮದಿಂದ ಆಚರಿಸಲಾಯಿತು.

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ವಂ. ಬೆಂಜಮಿನ್ ಪಿಂಟೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ,
ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಉತ್ಸಾಹದಿಂದ ಭಾಗವಹಿಸಿ, ಶಿಸ್ತು,
ಸಂಸ್ಕಾರ ಹಾಗೂ ಉತ್ತಮ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಅಲೋಶಿಯಸ್ ಡಿಸೋಜ ಹಾಗೂ ಮುಖ್ಯ ಅತಿಥಿಗಳಾದ ಡಾ. ಎಂ. ಗೋವಿಂದರಾಜ್
ಭಟ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಶಾಲೆಯ ಹಳೆಯ ವಿದ್ಯಾರ್ಥಿ ತಮ್ಮ
ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಮೆಲುಕು ಹಾಕಿ, ಶಾಲೆಯೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡರು.
ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಮೋಹಕವಾಗಿ ಮೂಡಿಬಂದವು. ವಿವಿಧ ಕ್ಷೇತ್ರಗಳಲ್ಲಿ ವಿಶೇಷ
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಪೋಷಕರು ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದು,
ಸಮಾರಂಭದ ಯಶಸ್ಸಿಗೆ ಸಹಕರಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಯು ಆಜ್ಞಾ ಜಗದೀಶ್ ಮತ್ತು ಸೌರಭ ನಿರೂಪಿಸಿದರು. ಸ್ನೇಹ ಸ್ವಾಗತಿಸಿದರು ಹಾಗೂ
ಪೂರ್ವಿ ವಂದನಾರ್ಪಣೆ ಸಲ್ಲಿಸಿದರು.
ಒಟ್ಟಿನಲ್ಲಿ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಹಾಗೂ ಸಂಭ್ರಮದಿಂದ ಮುಕ್ತಾಯಗೊಂಡಿತು.
