ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ – 2026, ರಾಷ್ಟೀಯ ನವಜಾತ ಶಿಶು ಸಪ್ತಾಹ -2026 ಮತ್ತು ನ್ಯೂಮೋನಿಯವನ್ನು ಯಶಸ್ವಿಯಾಗಿ ತಟಸ್ಥಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರೀಯಾ ಅಭಿಯಾನದ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮವು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಅವರು ಕಾರ್ಯಕ್ರಮದ ಉದ್ದೇಶ, ಮಕ್ಕಳ ಆರೋಗ್ಯದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ನ್ಯೂಮೋನಿಯವನ್ನು ಯಶಸ್ವಿಯಾಗಿ ತಟಸ್ಥಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರೀಯಾಯೋಜನೆಗಳನ್ನು ಯಾವ ರೀತಿ ಅನುಸರಿಸಬೇಕು ಅನ್ನುವುದನ್ನು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಕ್ಕಳ ತಜ್ಞ ಡಾ. ಕಶ್ಯಪ್ ಶೆಟ್ಟಿ ಹಾಗೂ ಇ.ಎನ್.ಟಿ ತಜ್ಞೆ ಡಾ. ವೀಣಾ ಕುಮಾರಿ ಕಾರ್ಯಕ್ರಮಗಳ ಕುರಿತಾಗಿ ಮಾಹಿತಿಯನ್ನು ವಿವರವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ಫಿಸಿಶಿಯನ್ ಡಾ ನಾಗೇಶ್, ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಶೆಟ್ಟಿ, ಡಿ.ಪಿ.ಸಿ – ಆರ್.ಸಿ.ಹೆಚ್ ಸುಧೀಂದ್ರ ಉಪಸ್ಥಿತರಿದ್ದರು.
ಆಪ್ತ ಸಮಾಲೋಚಕಿ ಸುಗಂಧಿ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ನಿರೂಪಿಸಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಹೆಚ್ ನಾಯ್ಕರ್ ವಂದಿಸಿದರು.
