ಕುದ್ರೋಳಿ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಧ್ವಜಾರೋಹಣ ನೆರವೇರುವ ಮೂಲಕ ವಿಧ್ಯುಕ್ತವಾಗಿ ಚಾಲನೆ ದೊರೆಯಿತು.

ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ ಬಳಿಕ ಧ್ವಜಾರೋಹಣ ನೆರವೇರಿತು. ಬಳಿಕ ತೈಲಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನೆರವೇರಿತು.

ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಎಚ್.ಎಸ್.ಸಾಯಿರಾಂ, ಕೃತೀನ್ ಅಮೀನ್, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ‌.ಜಿ.ಸುವರ್ಣ, ಸದಸ್ಯರಾದ ಲೀಲಾಕ್ಷ ಕರ್ಕೇರ, ಪಿ.ಕೆ.ಗೌರವಿ, ಶ್ರೀ ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು ಮೊದಲಾದವರಿದ್ದರು.

Leave a Reply

Your email address will not be published. Required fields are marked *