ಮಾಳ ಗ್ರಾಮ ಪಂಚಾಯತ್ ಅರಿವು ಕೇಂದ್ರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳ ಉದ್ಘಾಟನೆ

ಮಾಳ, ಕಾರ್ಕಳ: ಮಾಳ ಗ್ರಾಮ ಪಂಚಾಯತ್ ಇಲ್ಲಿನ ಅರಿವು ಕೇಂದ್ರದ ವತಿಯಿಂದ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿನ ಸಭಾಂಗಣದಲ್ಲಿ ಏರ್ಪಡಿಸಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ ಆಚಾರ್ಯ ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ ಪಂಚಾಯತ್ ಉಪಾಧ್ಯಕ್ಷರಾದ ವಿಮಲ ಪೂಜಾರಿ ಅರಿವು ಕೇಂದ್ರದ ಸಲಹಾ ಸಮಿತಿಯ ಸದಸ್ಯರು ಹಿರಿಯರಾದ ಶ್ರೀರಂಗ ಜೋಶಿ ಸಮೂಹ ಸಂಪನ್ಮೂಲ ವ್ಯಕ್ತಿ ಕೃಷ್ಣಕುಮಾರ್ ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.

ಈ ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆದಿದ್ದು ಪ್ರಾಥಮಿಕ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ದೇಶಭಕ್ತಿ ಗೀತೆ ಭಕ್ತಿ ಗೀತೆ ಜನಪದ ಗೀತೆ ಮತ್ತು ಭಾವಗೀತೆ ಸ್ಪರ್ಧೆಯನ್ನು ನಡೆಸಲಾಗಿದೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಿಂದ ಸುಮಾರು 116 ವಿದ್ಯಾರ್ಥಿಗಳು ಭಾಗವಹಿಸಿದ್ದು ಸಾರ್ವಜನಿಕರ ವಿಭಾಗದಲ್ಲಿ ಸುಮಾರು 20 ಸ್ಪರ್ಧಿಗಳು ಭಾಗವಹಿಸಿದ್ದರು. ಅರಿವು ಕೇಂದ್ರಕ್ಕೆ ನಿರಂತರವಾಗಿ ಭೇಟಿ ನೀಡಿ ಉತ್ತಮ ಓದುಗಾರರಾಗಿ ಕೆ ಎಸ್ ವೆಂಕಟೇಶ್ ಇವರನ್ನು ಈ ಸಂದರ್ಭ ಗೌರವಿಸಲಾಯಿತು.
ಬಹುಮಾನದ ವಿಜೇತರ ಪಟ್ಟಿಯನ್ನು ಪಂಚಾಯತ್ ಕಾರ್ಯದರ್ಶಿಯಾದ ಸವಿತ ಕುಮಾರಿ ವಾಚಿಸಿದರು ಮತ್ತು ವಸಂತಿ. ಪಂಚಾಯತಿನ ಎಲ್ಲಾ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಸುಧೀರ್ ಶೆಟ್ಟಿ ನಡೆಸಿ ಗ್ರಂಥ ಪಾಲಕಿ ಗೀತಾ ಸೇರಿಗಾರ್ ವಂದನಾರ್ಪಣೆಗೈದರು ಸ್ಪರ್ದಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವಿವಿಧ ಹೂಗಳ ಗಿಡಗಳನ್ನು ಬಹುಮಾನ ರೂಪದಲ್ಲಿ ನೀಡಲಾಯಿತು.

Leave a Reply

Your email address will not be published. Required fields are marked *