ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಲ್ಲಿ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎ ಗಫೂರ್ ಅಭಿಪ್ರಾಯಪಟ್ಟರು.


ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ರವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ಮೂಲಕ ಕೊಡ ಮಾಡಲಾದ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯನಿ ಇಂದಿರಾ ಬಿ ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.
