ಕಾರ್ಕಳ: ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಸ್ಕೌಟ್ಸ್ ದಿನಾಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಸ್ಕೌಟ್ಸ್ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ ಸ್ ನ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಜಾಲ್ಸೂರು ಅವರು ಸರ್ವ ಧರ್ಮ ಪ್ರಾರ್ಥನೆಯನ್ನು ನೆರವೇರಿಸಿಕೊಟ್ಟರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ ನ ಜಿಲ್ಲಾ ಉಪಾಧ್ಯಕ್ಷರಾದ ಸಾವಿತ್ರಿ ಮನೋಹರ್‍ರವರು ವಿದ್ಯಾರ್ಥಿಗಳಿಗೆ ವಿವಿಧ ಹಾಡು ಹಾಗೂ ಚಟುವಟಿಕೆಗಳ ಮೂಲಕ ಸ್ಕೌಟ್ಸ್ ಮತ್ತು ಗೈಡ್ ಸ್ ನ ಕಾರ್ಯಯೋಜನೆಗಳ ಬಗ್ಗೆ ಅರಿವು ಮೂಡಿಸಿದರು. ಕ್ರೈಸ್ಟ್‍ಕಿಂಗ್ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಜೋಸ್ನಾ ಸ್ನೇಹಲತಾರವರು ಹಾಗೂ ಪ್ರಾಥಮಿಕ ವಿಭಾಗದ ಮುಖೋಪಾಧ್ಯಾಯರಾದ ರುಡಾಲ್ಪ್ ಕಿಶೋರ್ ಲೋಬೋರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಬ್ ಮತ್ತು ಬುಲ್ ಬುಲ್, ಬನ್ನೀಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದೆ ಅಡುಗೆ, ಹೂಗುಚ್ಚ ತಯಾರಿ ಹಾಗೂ ಚಿತ್ರಕಲಾ ಚಟುವಟಿಕೆಗಳನ್ನು ಆಯೋಜಿಸಲಾಯಿತು. ಸ್ಕೌಟ್ಸ್ ಶಿಕ್ಷಕಿ ಸುಮಂಗಲರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *