ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಮಂಗಳೂರು:  ನಿರಂತರ ಸಮಾಜ ಕಾರ್ಯಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ತೊಡಗಿಸಿಕೊಂಡಿದೆ. ಮುಲ್ಕಿಯಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಮಹಾದಾನಿ ಡಾ ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ, ಆಶೀರ್ವಾದಿಂದ ಸಂಕೀರ್ಣದ ಕೆಲಸ ಪ್ರಗತಿಯಲ್ಲಿದೆ. ಸಂಕೀರ್ಣದಲ್ಲಿ  ಶಶಿರೇಖಾ ಆನಂದ ಶೆಟ್ಟಿ  ಅವರ ಹೆಸರಿನಲ್ಲಿ ವೇದಿಕೆ ಇದೆ. ಇದರ ಜೊತೆಗೆ ಕಿರು ಸಭಾಂಗಣ, ಧರ್ಮಚಾವಡಿ, ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯೂ ಇದೆ.  ಡಿಸೆಂಬರ್ ತಿಂಗಳಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆಗೊಳ್ಳಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟ ಅವರು ತಿಳಿಸಿದರು.

ಅವರು ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಒಕ್ಕೂಟದ ಮಹಾ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ ಅವರು ಸಭೆಯನ್ನು ಉದ್ಘಾಟಿಸಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಮಧ್ಯಮವರ್ಗದವರ ಕಣ್ಣೀರನ್ನು ಒರೆಸುವ ಕೆಲಸ ಮಾಡುತ್ತಿದೆ. 40 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾದ ಬಳಿಕ‌ ಒಕ್ಕೂಟದ ಚಿತ್ರಣವನ್ನೇ ಬದಲಾಯಿಸಿದರು ಎಂದರು.

ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ಐಕಳರ ಸಂಘಟನಾ ಚತುರತೆ, ದಿನನಿತ್ಯ ಓಡಾಟ, ದಾನಿಗಳ ಸಂಪರ್ಕದಿಂದ ಒಕ್ಕೂಟ ಎತ್ತರಕ್ಕೆ ಬೆಳೆದಿದೆ ಎಂದರು.

ಯುವ ವಿಭಾಗದ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ ಮಾತನಾಡಿ  ಒಕ್ಕೂಟಕ್ಕೆ ಯುವಕರನ್ನು ಸೆಳೆಯುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಒಕ್ಕೂಟದ ಅಧ್ಯಕ್ಷರೊಂದಿಗೆ ಚರ್ಚಿಸಿ ಯುವ ಸಮಾವೇಶ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು. ಸಭೆಯಲ್ಲಿ ಉದ್ಯಮಿ, ದಾನಿಗಳಾದ ರಾಜೇಂದ್ರ ವಿ ಶೆಟ್ಟಿ ಪಂಜುರ್ಲಿ ಗ್ರೂಪ್ಸ್,  ಶಶಿಧರ್ ಶೆಟ್ಟಿ ಇನ್ನಂಜೆ, ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಬೆಳ್ಳಾಡಿ ಅಶೋಕ್ ಶೆಟ್ಟಿ, ಅರವಿಂದ್ ಆನಂದ್ ಶೆಟ್ಟಿ,  ಮುನಿಯಾಲ್ ಉದಯಕುಮಾರ್ ಶೆಟ್ಟಿ, ಹರೀಶ್ ಶೆಟ್ಟಿ ಪಡುಕುದೂರು, ವಸಂತ ಶೆಟ್ಟಿ,  ರತ್ನಾಕರ ಶೆಟ್ಟಿ ಎಕ್ಕಾರ್, ಸಂತೋಷ್ ಕುಮಾರ್ ಹೆಗ್ಡೆ,  ರತ್ನ ಪಿ. ಶೆಟ್ಟಿ, ಚಿತ್ರ ಆರ್. ಶೆಟ್ಟಿ, ಆರತಿ ಆಳ್ವ,  ಹುಂತ್ರಿಕೆ ಸುಧಾಕರ್ ಶೆಟ್ಟಿ, ಅಕ್ಕುಂಜೆ ಸತೀಶಚಂದ್ರ ಶೆಟ್ಟಿ, ಸನ್ಮಿತ್ ಬಾಬು ಶೆಟ್ಟಿ, ಸುದೇಶ್ ವಿ.ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರ್, ಹರಿಪ್ರಸಾದ್ ರೈ, ಮಂಜುನಾಥ್ ಶೆಟ್ಟಿ ಕೊಡ್ಲಾಡಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಶ್ರೀಧರ್ ಶೆಟ್ಟಿ ಆರೂರು, ಆನಂದ್ ಶೆಟ್ಟಿ ಕಾವೂರು ಸೇರಿದಂತೆ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರು  ಉಪಸ್ಥಿತರಿದ್ದರು. 

ಸುರೇಶ್ ಶೆಟ್ಟಿ ಶಿಬರೂರು ಪ್ರಾರ್ಥನೆಗೈದರು. 

ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ‌ ನಿರ್ವಹಿಸಿದರು.

Leave a Reply

Your email address will not be published. Required fields are marked *