ಮಹಿಳೆಯರು ಮನೆಯ ಜವಾಬ್ದಾರಿಗಳನ್ನು ಹಂಚಿಕೊಡಿ, ತಾಳ್ಮೆಯಿಂದ ಕಾಯಿರಿ – ಡಾ. ಮಧುಮಾಲಾ

ವರದಿ ರಾಯಿ ರಾಜಕುಮಾರ
ಮಹಿಳೆಯರು ಸಾಮಾಜಿಕ ಜವಾಬ್ದಾರಿಗಳನ್ನು ತಿಳಿದುಕೊಳ್ಳುವುದರೊಂದಿಗೆ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಮಕ್ಕಳು ನಮ್ಮನ್ನು ನೋಡಿ ಕಲಿಯುವುದರಿಂದಾಗಿ ಕಾರ್ಯಗಳನ್ನು ಹಂಚಿಕೊಟ್ಟು ಸೂಕ್ತ ಮಾರ್ಗದರ್ಶನವನ್ನು ಮಾಡಬೇಕಾಗುತ್ತದೆ ಎಂದು ಆಳ್ವಾಸ್ ನ ಡಾ. ಮಧುಮಾಲಾ, ಮನವರಿಕೆ ಮಾಡಿಕೊಟ್ಟರು.

ಅವರು ಮಾರ್ಚ್ 9ರಂದು ಮೂಡುಬಿದಿರೆ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಮಹಿಳಾ ಸಶಕ್ತಿಕರಣದ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ಮಹಿಳೆಯರು ಮಕ್ಕಳಲ್ಲಿ ಹಾಗೂ ಕುಟುಂಬದ ಮಂದಿಯಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದಕ್ಕಾಗಿ ಇರುವ ಜವಾಬ್ದಾರಿಗಳನ್ನು, ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಉಳಿದವರಲ್ಲಿ ಹಂಚಿಕೊಂಡು ಸಂಸ್ಕಾರ, ಸಂಸ್ಕೃತಿ, ಆಹಾರ ಪದ್ಧತಿ, ಕಾಳಜಿ, ಜಾಗರೂಕತೆ ಹೀಗೆ ಪ್ರತಿಯೊಂದುರಲ್ಲಿಯೂ ಮಾರ್ಗದರ್ಶನವನ್ನು ಮಾಡಿದಲ್ಲಿ ಮಾತ್ರ ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೆ ಸಾಧ್ಯವಾಗುತ್ತದೆ ಎಂದು ಹಲವಾರು ಉದಾಹರಣೆಗಳ ಮೂಲಕ ತಿಳಿಸಿದರು. ಹೆಣ್ಣು ಮಕ್ಕಳಲ್ಲಿ ಆತ್ಮವಿಶ್ವಾಸ, ಲಿಂಗ ಸಮಾನತೆ ಇತ್ಯಾದಿಗಳನ್ನು ಹೆಂಗಸರು ಮೊತ್ತ ಮೊದಲಾಗಿ ಕಾರ್ಯರೂಪಕ್ಕೆ ತರಬೇಕಾಗಿದೆ ಎಂಬುದನ್ನು ಮನದಟ್ಟು ಮಾಡಿಸಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಸದಸ್ಯರುಗಳು, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳು, ಹಾಜರಿದ್ದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಅಧ್ಯಕ್ಷತೆ ವಹಿಸಿದ್ದರು. ಗ್ಯಾರೆಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶೈಲಾ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯತ್ನ ಸುನಂದ ಜೈನ್ ಹಾಜರಿದ್ದರು.

Leave a Reply

Your email address will not be published. Required fields are marked *