ಸೋದೆ ಮಠ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.
ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ಶಾಲು ಹೊದಿಸಿ ಗೌರವಿಸಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *