ಕಾರ್ಕಳ: ಮಾ. 14 ರಂದು ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಕಾರ್ಕಳ, ಮಾ. 12: ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿನಲ್ಲಿ ಕಾರ್ಕಳ ಬಿಜೆಪಿ ವತಿಯಿಂದ ವಿಶೇಷವಾಗಿ ಜನರ ಸಮಸ್ಸ್ಯೆಗಳನ್ನು ಸರಿ ಮಾಡಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾ. 14 ರಂದು ಗ್ರಾಮ ಮಟ್ಟದಲ್ಲಿ ಹಾಗೂ ಪುರಸಭೆ, ನಗರ ಪಾಲಿಕೆ ಮಟ್ಟದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದೆಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ಕೆಂಪು ಕಲ್ಲು, ಮರಳಿನ ಅಭಾವದಿಂದಾಗಿ ಬಡ ಜನರಿಗೆ ಸಮಸ್ಯೆಯನ್ನುಂಟು ಮಾಡಿದೆ. ಇದರಿಂದ ಕಟ್ಟಡ ಕಾರ್ಮಿಕರಿಗೆ ಕೆಲಸ ಇಲ್ಲದೇ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಹೇಳಿದರು. ವಿಧವೆ ವೇತನ, ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಗಳಲ್ಲಿ ಗೊಂದಲ, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ, ಲೋಡ್‌ ಶೆಡ್ಡಿಂಗ್‌ ಹಾಗೂ ನಿರಂತರ ವಿದ್ಯುತ್ ದರ ಏರಿಕೆ, ಇಂದು ಸರ್ಕಾರ ರಾಜ್ಯದಲ್ಲಿ ಸ್ಟ್ಯಾಂಪ್ ಪೇಪರ್ ಹೆಚ್ಚಳ, ಗ್ಯಾರಂಟಿ ಹೆಸರಿನಲ್ಲಿ ಜನರ ಪಿಕ್ ಪಾಕೆಟ್ ಆಡಳಿತ ಮಾಡುವಂತದು, ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಒಂದೇ ಒಂದು ರೇಷನ್ ಕಾರ್ಡ್ ಕೊಟ್ಟಿಲ್ಲ ಬದಲಾಗಿ ಬಿಪಿಎಲ್ ಕಾರ್ಡ್ ಗಳನ್ನ ರದ್ದು ಮಾಡಿಸಿದ ಈ ಸರ್ಕಾರಕ್ಕೆ ಧ್ವನಿ ಎತ್ತಬೇಕು ಎಂದು ಹೇಳಿದರು. ಎಲ್ಲ ಜನ ಸಾಮಾನ್ಯರಿಗೆ ತಿಳಿಸ ಬೇಕು ಹಾಗೂ ಜನರ ಕಷ್ಟಗಳನ್ನು ಬಗೆ ಹರಿಸಬೇಕು ಎನ್ನುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸಲಾಗುದು ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದರು. ಗ್ರಾಮ ಪಂಚಾಯತ್‌ನಿಂದ ವಿಧಾನಸೌಧದವರೆಗೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಹೇಳಿದರು.
ಈ ಬಗ್ಗೆ ಶಾಸಕ ಸುನೀಲ್ ಕುಮಾರ್ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ರಾಜ್ಯ ಸರ್ಕಾರವೇ ನೇರವಾಗಿ ಜವಳಿ ಪಾರ್ಕ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *