ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿ ಇದರ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಹಳೆ ವಿದ್ಯಾರ್ಥಿ ಸಂಘ ಜಂಟಿ ಆಶ್ರಯದಲ್ಲಿ ಅಮೃತ ಮಹೋತ್ಸವ ಹಾಗೂ ನೂತನ ಕಟ್ಟಡ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ ಕಾರ್ಕಳ ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿಗಳಾದ ಕೆ ಉಮೇಶ್ ರಾವ್ ಇವರು ಬಿಡುಗಡೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಕ್ಷೇತ್ರದ ಪ್ರಧಾನ ಅರ್ಚಕರಾದ ಸದಾನಂದ ಶಾಂತಿ, ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಧರ್ ಎನ್. ಸುವರ್ಣ, ಕೋಶಾಧಿಕಾರಿ ಸಂತೋಷ್ ಹೆಗ್ಡೆ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಹೆಗ್ಡೆ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಡಾ. ಜ್ಞಾನೇಶ್ ಕಾಮತ್, ಕಾರ್ಯದರ್ಶಿ ಹರೀಶ್ ಅಂಚನ್, ಅಮೃತ ಮಹೋತ್ಸವ ಕಾರ್ಯಕ್ರಮದ ಸಂಯೋಜಕರಾದ ಪ್ರಕಾಶ್ ರಾವ್, ನಿವೃತ್ ಅಧ್ಯಾಪಕರು ಅಣ್ಣು ಮಾಸ್ಟ್ರು,ಅಧ್ಯಾಪಕರಾದ ಸುಧಾಕರ್ ಸಮಿತಿಯ ಸದಸ್ಯರಾದ ವಸಂತ್.ಎಂ, ಸಂತೋಷ್ ರಾವ್, ತಾರನಾಥ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಅಮೃತ ಮಹೋತ್ಸವ ಸಮಿತಿಯ ಸಂಚಾಲಕರಾದ ಪ್ರಕಾಶ್ ರಾವ್ ಇವರು ಸ್ವಾಗತಿಸಿ ವಂದನಾರ್ಪಣೆಯನ್ನು ಗೈದರು.

Leave a Reply

Your email address will not be published. Required fields are marked *