ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಪ್ಲೇಸ್ಮಂಟ್ ಸೆಲ್ (ಪ್ಲೇಸ್ಮಂಟ್ ಡ್ರೈವ್) ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳನ್ನು ವೃದ್ಧಿಸುವ ಉದ್ದೇಶದಿಂದ 2026ನೇ ಸಾಲಿನ ಎರಡನೇ ಹಂತದ ಮುಂದುವರಿದ ಉದ್ಯೋಗ ಮೇಳವನ್ನು ಮಾರ್ಚ್ 21 ರಂದು ಕಾಲೇಜಿನ ಆಡಿಯಟೋರಿಯಂನಲ್ಲಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವೈವಿಧ್ಯಮಯ ವೃತ್ತಿಕ್ಷೇತ್ರಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದವು.

ಈ ಕಾರ್ಯಕ್ರಮದ ಮೊದಲಿಗೆ ವಿದ್ಯಾರ್ಥಿಗಳಿಗೆ ಪ್ಲೇಸ್ಕೆಂಟ್ ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ನಂತರ ಆಯ್ಕೆ ಪ್ರಕ್ರಿಯೆಯ ವಿವಿಧ ಹಂತಗಳಾದ ಲಿಖಿತ ಪರೀಕ್ಷೆ ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನಗಳನ್ನು ಕ್ರಮಬದ್ಧವಾಗಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ. ರಾಧಾಕೃಷ್ಣ ಅವರು ತಮ್ಮ ಅಧ್ಯಕ್ಷಯ ಭಾಷಣದಲ್ಲಿ, “ಇಂತಹ ಉದ್ಯೋಗ ಮೇಳಗಳು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಉಪಯುಕ್ತವಾಗಿದ್ದು ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಲಭ್ಯವಾಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ಲೇಷ್ಮೆಂಟ್ ಸಂಯೋಜಕಿ ಸವಿತಾ ಕೋಟ್ಯಾನ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ತೋರಿದರು.
ಈ ಎರಡನೇ ಹಂತದ ಉದ್ಯೋಗ ಮೇಳವು ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಕೆ ಅಗತ್ಯವಿರುವ ಕೌಶಲ್ಯಗಳ ಕುರಿತು ಅರಿವು ಮೂಡಿಸುವುದರ ಜೊತೆಗೆ, ಅವರ ಭವಿಷ್ಯದ ಬೆಳವಣಿಗೆಗೆ ದಾರಿದೀಪದಂತೆ ನೆರವಾಯಿತು.
ಕಾರ್ಯಕ್ರಮದಲ್ಲಿ ತೃತೀಯ ಬಿಸಿಎ ವಿದ್ಯಾರ್ಥಿನಿ ಪ್ರತಿಷ್ಠಾ ಜೈನ್ ಕಾರ್ಯಕ್ರಮವನ್ನು ನಿರ್ವಹಿಸಿ, ಸ್ವಾಗತಿಸಿದರು.
