ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮ

ಮಂಗಳೂರು ಮಾ 26: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳಿಂದ ಇಂದು ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುಕೆಜಿ ಯ ಸುಮಾರು 50 ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಬಟ್ಟೆಯನ್ನು ತೊಟ್ಟು ದೀಪವನ್ನು ಕೈಯಲ್ಲಿ ಹಿಡಿದು ರೇಷ್ಮಾ ಮೆಮೋರಿಯಲ್ ಸಭಾಂಗಣದ ಹೊರ ಆವರಣದಿಂದ ಮೆರವಣಿಗೆಯನ್ನು ನಡೆಸಿದರು.

ಈ ಮೆರವಣಿಗೆಗೆ ಸಂಸ್ಥೆಯ ಸಂಸ್ಥಾಪಕರಾಗಿರುವ ಡಾ. ಕೆ.ಸಿ ನಾೈಕ್ ಚಾಲನೆಯನ್ನು ನೀಡಿದರು. ನಂತರ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕಾರ್ಯಕ್ರಮದ ಮಹತ್ವದ ಕುರಿತಂತೆ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಮಾತನಾಡಿ ನಾವು ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆ ಸಂಸ್ಕಾರವನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪೋಷಕರೆಲ್ಲರೂ ತಮ್ಮ ಮಕ್ಕಳಿಗೆ ಶಿಸ್ತು ಮತ್ತು ಸಂಸ್ಕಾರವನ್ನು ಕಲಿಸಿಕೊಡಬೇಕು. ಅದಕ್ಕೋಸ್ಕರ ಮಹಾಭಾರತದ ಪಾಂಡವರ ಮತ್ತು ಕೌರವರ ಕುರಿತಂತೆ ಒಂದು ಕಥೆಯನ್ನು ಹೇಳಿದರು. ಕುರುಕ್ಷೇತ್ರದ ಯುದ್ಧದಲ್ಲಿ ಪಾಂಡವರಲ್ಲಿ 5 ಜನರು ಬದುಕಿದರು ಮತ್ತು ಕೌರವರೆಲ್ಲರು ಯಾಕೆ ಸತ್ತು ಹೋದರು ಎಂದು ಶ್ರೀ ಕೃಷ್ಣನಲ್ಲಿ ಗಾಂಧಾರಿ ಪ್ರಶ್ನೆ ಮಾಡುತ್ತಾರೆ. ಇದಕ್ಕೆ ಶ್ರೀ ಕೃಷ್ಣ ಉತ್ತರಿಸುತ್ತಾರೆ ಕುಂತಿ ಪಾಂಡವರಿಗೆ ಸಂಸ್ಕಾರ ಮತ್ತು ಮೌಲ್ಯಗಳನ್ನು ಕಲಿಸಿಕೊಟ್ಟಿರುತ್ತಾರೆ. ಇದುವೇ ಇದಕ್ಕೆ ಕಾರಣ ಎಂದು ಹೇಳಿ, ಸಂಸ್ಕಾರ ಮತ್ತು ಮೌಲ್ಯಗಳನ್ನು ಮಕ್ಕಳಿಗೆ ಕಲಿಸಿಕೊಡಬೇಕೆಂದು ತಿಳಿಸಿದರು. ಸಭಾಕಾರ್ಯಕ್ರಮದಲ್ಲಿ ಯು.ಕೆ.ಜಿಯಿಂದ ಒಂದನೇ ತರಗತಿಗೆ ಸೇರ್ಪಡೆಗೊಳ್ಳುವ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಬೇರೆ ಬೇರೆ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾಗಿರುವ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಗುರುತಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಡಾ. ಕೆ.ಸಿ ನಾೈಕ್ ಮಾತನಾಡಿ ಸಂಸ್ಥೆಯ ಬಗ್ಗೆ ಅಭಿಮಾನವಿಟ್ಟು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಓದಿಸುತ್ತಿರುವ ಪೋಷಕರಿಗೆ ಅಭಿನಂದನೆಯನ್ನು ಸಲ್ಲಿಸಿದರು. ವಿದ್ಯಾರ್ಥಿಗಳನ್ನು ಮುಂದಿನ ದಿನಗಳಲ್ಲಿಯು ಹೆಚ್ಚಿನ ಸಂಸ್ಕಾರ ಮೌಲ್ಯಗಳನ್ನು ಕೊಟ್ಟು ಓದಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ ಕೆ ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿ ಕ್ಯಾ. ಎಲ್.ಬಿ ಕಾಮತ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಸ್ವಾಗತವನ್ನು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ಸುಷ್ಮ ಸತೀಶ್, ಧನ್ಯವಾದವನ್ನು ಅರ್ಚನ ಹಾಗೂ ಅರುಣಿತ ನಿರೂಪಿಸಿದರು.

 

Leave a Reply

Your email address will not be published. Required fields are marked *