ಬನ್ನಡ್ಕ: ಇಲ್ಲಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಮಾರ್ನಾಡು ಬನ್ನಡ್ಕ ಸರ್ಕಾರಿ ಶಾಲೆಯ ಶಿಕ್ಷಕರಾದ ರಾಬರ್ಟ್ ಅವರು ವಹಿಸಿದ್ದರು. ಸಂವಿಧಾನದ ಮಹತ್ವ ಮತ್ತು ಬಾಬಾಸಾಹೇಬರ ಹೋರಾಟದ ಹಾದಿಯನ್ನು ಕುರಿತು ಅವರು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ “ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಗಳು” ಎಂಬ ವಿಷಯದ ಮೇಲೆ ವಿಶೇಷ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಈ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬರ ಕುರಿತಾದ ತಮ್ಮ ಜ್ಞಾನವನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಸಿದರು. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹರಿಕಾರನನ್ನು ಸ್ಮರಿಸುವ ಮೂಲಕ ಕಾರ್ಯಕ್ರಮವು ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.
