ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ.

ಶಾಲಾ ವಿದ್ಯಾರ್ಥಿನಿಯರಾದ ಜಿ. ಮಾಧುರ್ಯ ಹಾಗೂ ಪೂರ್ವಿಭಟ್ 620 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಒಟ್ಟು ಏಳು ಮಕ್ಕಳು 600ಕ್ಕೂ ಹೆಚ್ಚು ಅಂಕಗಳನ್ನು ಪಡೆದು, 35 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಶಾಲಾ ಗುಣಮಟ್ಟದ ಶೇಕಡಾ ವಾರು 94.58 ಪಡೆದು ಶಾಲೆಗೆ ಗರಿಮೆಯನ್ನು ತಂದಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳು ಸಹ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ಸಹ ಭಾಗವಹಿಸಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವುದು ಬಹಳ ಸಂತಸದ ವಿಷಯ ಎಂದು ಶಾಲಾ ಮುಖ್ಯ ಪರಿಮಳ ಎಂ ವಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿರಂತರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣವಾಗಿದೆ ಎಂಬುದು ಗಮನಾರ್ಹ ಅಂಶವಾಗಿದೆ.
