ಉಡುಪಿ: ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಉಡುಪಿ ಏಪ್ರಿಲ್ 29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಇವರ ಮೂಲಕ ಎಮ್.ಆರ್.ಪಿ.ಎಲ್ ಮತ್ತು ಕರ್ನಾಟಕ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನ ಸಿ.ಎಸ್.ಆರ್ ಅನುದಾನದಡಿ ಏಪ್ರಿಲ್ 24 ರಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್‍ನ ಎ.ಜಿ.ಎಮ್ ರಮೇಶ್ ವೈದ್ಯರನ್ನು ಕೃತಜ್ಞತಾ ಪೂರ್ವಕವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಎನ್‍ಫೋರ್ಸ್ ಮೆಂಟ್ ಅಧಿಕಾರಿ ಡಾ. ಶ್ರೀರಾಮ್ ರಾವ್ ಕೆ, ಡಿಪಿಡಿಓ ಡಾ.ಪ್ರಶಾಂತ್ ಭಟ್, ಜಿಲ್ಲಾ ಎನ್.ಸಿ.ಡಿ ಅಧಿಕಾರಿ ಡಾ.ಲತಾ ನಾಯಕ್ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ಬ್ಯಾಂಕ್‍ನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *