ಉಡುಪಿ: ಮೇ. 02 ರಂದು ಕಾರಂತ ಉಪನ್ಯಾಸ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಮೇ 02 ರಂದು ಸಂಜೆ 4 ಗಂಟೆಗೆ ಬ್ರಹ್ಮಗಿರಿಯ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಕೆ.ಮುರಳೀಧರ್‍ ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಉದಯವಾಣಿಯ ವಿಶ್ರಾಂತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ ಕಾರಂತರ ಬದುಕು-ಬರಹಗಳು ಹಿರಿಯ ನಾಗರಿಕರಿಗೆ ಮಾದರಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಬಸರೂರು ರಾಜೀವ ಶೆಟ್ಟಿ ,ಚಿಂತಕ ಮುಷ್ತಾಕ್ ಹೆನ್ನಾಬೈಲ್ ಭಾಗವಹಿಸಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *