ದಾವಣಗೆರೆ ಬಾಗಲಕೋಟೆ ಉಪ ಚುನಾವಣೆ ಗೆಲುವು, ಇದು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಗೆ ಸಂದ ಜಯ: ಉದಯ ಶೆಟ್ಟಿ ಮುನಿಯಾಲು ಹರ್ಷ

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿರುವುದು ಅತ್ಯಂತ ಸಂತಸದ ತಂದಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿದ ಬೆಂಬಲದ ಸ್ಪಷ್ಟ ಸಂಕೇತವಾಗಿದೆ. ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸಮಗ್ರ ಆಡಳಿತಕ್ಕೆ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿರುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಲಾದ ಉಮೇಶ್ ಮೇಟಿ ಮತ್ತು ಸಮರ್ಥ್ ಶ್ಯಾಮನೂರ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಅವರು ಜನರ ನಿರೀಕ್ಷೆಗಳಿಗೆ ತಕ್ಕಂತೆ ಸೇವೆ ಸಲ್ಲಿಸಿ ಕ್ಷೇತ್ರಗಳ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಿದ್ದಾರೆ ಎಂಬ ವಿಶ್ವಾಸ ನಮ್ಮದು.
ಈ ಐತಿಹಾಸಿಕ ಗೆಲುವು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂದ ಜಯವಾಗಿದ್ದು, ಜನಸೇವೆಯ ದಿಕ್ಕಿನಲ್ಲಿ ಇನ್ನಷ್ಟು ಉತ್ಸಾಹದಿಂದ ಮುಂದುವರಿಯಲು ಪ್ರೇರಣೆ ನೀಡಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳು ಜನಮನವನ್ನು ಗೆದ್ದಿದ್ದು ಗ್ಯಾರಂಟಿ ಯೋಜನೆಗಳು ದಿನೇ ದಿನೇ ಜನಪ್ರೀಯವಾಗುತ್ತಿದೆ, ಬಿಜೆಪಿ ಅಪಪ್ರಚಾರಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ ಜನತೆಯನ್ನು ಈ ಸಂದರ್ಭದಲ್ಲಿ ಅಭಿನಂದೆನಗಳು ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *