ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ

ಮೂಡುಬಿದಿರೆ: ರೋಗಿಗಳ ನೋವನ್ನು ಹಂಚಿಕೊಂಡು, ಅವರಿಗೆ ಮಾನಸಿಕ ಧೈರ್ಯ ನೀಡುವುದು ಹಾಗೂ ಚಿಕಿತ್ಸಾ ಪ್ರಕ್ರಿಯೆಯಲ್ಲಿ ನಿರಂತರ ಬೆಂಬಲ ನೀಡುವುದು ದಾದಿಯರ ಪ್ರಮುಖ ಕರ್ತವ್ಯ ಎಂದು ಕಾರ್ಕಳ ತಾಲೂಕು ಅಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಕಮಲಾ ಪಿ.ಜೆ. ನುಡಿದರು.
ಅವರು ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯರ ದಾದಿಯರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರ್ಸಿಂಗ್ ಸಿಬ್ಬಂದಿ ಸದಾ ಕರುಣೆ, ಸಹಾನುಭೂತಿ ಮತ್ತು ಶಿಸ್ತಿನೊಂದಿಗೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ನಸಿರ್ಂಗ್ ವೃತ್ತಿಯು ಅತ್ಯಂತ ಶ್ರೇಷ್ಠ ಹಾಗೂ ಮಾನವೀಯ ಸೇವೆಯ ವೃತ್ತಿಯಾಗಿದ್ದು, ಪ್ರತಿಯೊಬ್ಬ ದಾದಿಯರು ತಮ್ಮ ವೃತ್ತಿಯನ್ನು ಗೌರವದಿಂದ ನಿರ್ವಹಿಸಬೇಕು ಎಂದು ತಿಳಿಸಿದರು.

ಆಳ್ವಾಸ್ ಹೆಲ್ತ್ ಸೆಂಟರ್ ನ ನರ್ಸಿಂಗ್ ಅಧೀಕ್ಷಕಿ ಜುಲೇಖಾ ಖಾನ್ ಮಾತನಾಡಿ, ಭಾರತದಲ್ಲಿ ನರ್ಸಿಂಗ್ ಕ್ಷೇತ್ರವು ಕಳೆದ ಹಲವು ವರ್ಷಗಳಲ್ಲಿ ಬಹುಬೇಡಿಕೆಯ ವೃತ್ತಿಯಾಗಿದ್ದು, ಆಧುನಿಕ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ನರ್ಸಿಂಗ್ ವೃತ್ತಿಗೆ ಹೆಚ್ಚಿನ ಗೌರವ ಮತ್ತು ಬೇಡಿಕೆ ಇದೆ. ವಿದೇಶಗಳಲ್ಲಿಯೂ ಭಾರತೀಯ ನರ್ಸಿಂಗ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದ್ದು, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಯುಕೆ ಹಾಗೂ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರತೀಯ ದಾದಿಯರು ತಮ್ಮ ಸೇವಾ ಮನೋಭಾವ, ಶಿಸ್ತು ಮತ್ತು ವೃತ್ತಿಪರತೆಯಿಂದ ಉತ್ತಮ ಹೆಸರು ಗಳಿಸಿದ್ದಾರೆ ಎಂದು ಹೇಳಿದರು. ಉತ್ತಮ ಶಿಕ್ಷಣ, ಭಾಷೆ ಕೌಶಲ್ಯ ಹಾಗೂ ವೃತ್ತಿಪರ ನೈಪುಣ್ಯ ಹೊಂದಿರುವ ನರ್ಸಿಂಗ್ ವಿದ್ಯಾರ್ಥಿಗಳು ವಿಶ್ವದ ಯಾವುದೇ ಭಾಗದಲ್ಲಿ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಬಹುದು ಎಂದು ತಿಳಿಸಿದರು.

ಸಭಾ ಕಾರ್ಯಕ್ರಮದ ಬಳಿಕ ನರ್ಸಿಂಗ್ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನರಂಜನಾ ಆಟಗಳನ್ನು ಆಯೋಜಿಸಲಾಗಿತ್ತು.
ಕಾರ್ಕಳ ತಾಲೂಕು ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಕಮಲಾ ಪಿ.ಜೆ. ಆಳ್ವಾಸ್ ಹೆಲ್ತ್ ಸೆಂಟರ್‍ನ ಹಿರಿಯ ಶುಶ್ರೂಕಿ ಪುಷ್ಪ ರೈಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಅಲೆಶ್ಶಿಯಾ ಡಿಸೋಜಾ, ಅರಂಟಾ ರೇನು ನಿರೂಪಿಸಿ, ನಿಕ್ಸಿ ಎನ್‍ಎಮ್ ವಂದಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ ಹನ ಶೆಟ್ಟಿ, ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ ನ ಪ್ರಾಚಾರ್ಯ ಡಾ ಯತಿಕುಮಾರಸ್ವಾಮಿ ಗೌಡ ಇದ್ದರು.

Leave a Reply

Your email address will not be published. Required fields are marked *