ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಜರ್ಮನ್ ಮಲ್ಟಿ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (ಕೆಜಿಎಂಎಸ್ಡಿಸಿ) ಸೊಸೈಟಿ, ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ) ಮಂಗಳೂರು ಇದರ
ನೂತನ ಕಟ್ಟಡದ ಉದ್ಘಾಟನೆ ಮೇ 23 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕದ್ರಿಹಿಲ್ಸ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಉಪಸ್ಥಿತಿಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
