ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಮೇ 24 ರಿಂದ 26 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 24 ರಂದು ಬೆಳಗ್ಗೆ 10.30 ಕ್ಕೆ ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಸ್ಥಳೀಯ ಕಾರ್ಯಕ್ರಮ, ಮ. 12.45 ಕ್ಕೆ ಉಡುಪಿಯ ಅಯ್ಯಪ್ಪ ನಗರದಲ್ಲಿರುವ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ (ರಿ) ಇವರ ಅಧೀನದಲ್ಲಿರುವ ವಿಜೇತ ವಿಶೇಷ ವಸತಿ ಶಾಲೆಗೆ ಭೇಟಿ, ಮ. 3.30 ಕ್ಕೆ ಕುಂದಾಪುರ ತಾಲೂಕು ತೆಕ್ಕಟ್ಟೆಯ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿರುವ ಮಹಿಳಾ ಸ್ಪಂದನ ಸಮಾವೇಶದಲ್ಲಿ ಭಾಗಿ, ಸಂಜೆ 5.30 ಕ್ಕೆ ಉಡುಪಿ ನಗರದ ಐ.ಬಿ ಬಳಿ ಇರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮೇ. 25 ರಂದು ಬೆಳಗ್ಗೆ 9 ಗಂಟೆಗೆ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ, 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ PಔSಊ ಅಧಿನಿಯಮ 2013 ರ ತರಬೇತಿ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟನೆ, ಮ. 12 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ, 3.30 ಕ್ಕೆ ಮಿಷನ್ ಕಂಪೌಂಡ್ ಬಳಿ ಇರುವ ಮಹಿಳಾ ಪೊಲೀಸ್ ಠಾಣೆಗೆ ಭೇಟಿ, ಸಂಜೆ 5 ಗಂಟೆಗೆ ಉಡುಪಿಯ ಬನ್ನಂಜೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ, ನಂತರ ವಾಸ್ತವ್ಯ ಮಾಡಲಿದ್ದಾರೆ.
ಮೇ 26 ರಂದು ಬೆಳಗ್ಗೆ 9.15 ಕ್ಕೆ ಬ್ರಹ್ಮಾವರದಲ್ಲಿರುವ ಗೋಡಂಬಿ ತಯಾರಿಸುವ ಶ್ರೀ ಕೃಷ್ಣ ಪ್ರಸಾದ್ ಆಗ್ರೋ ಇಂಡಸ್ಟ್ರೀಸ್‍ಗೆ ಭೇಟಿ, 11 ಗಂಟೆಗೆ ನಗರದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಹಿಳಾ ಸ್ಪಂದನ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3 ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
