ಉಡುಪಿ: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ. ರಾಮಪ್ಪ ಎಂ ಅವರು ಮೇ 28 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 28 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಮೇ 29 ರಂದು ಬೆಳಗ್ಗೆ 8 ಗಂಟೆಗೆ ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ, 11 ಗಂಟೆಗೆ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಿಗಮದ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 2 ಗಂಟೆಗೆ ಸಾಯಬ್ರಕಟ್ಟೆ ಯಡ್ತಾಡಿ ಗ್ರಾಮದ ಭೋವಿ ಕಾಲೋನಿಗೆ ಭೇಟಿ ನೀಡಿ, ನಂತರ ವಾಸ್ತವ್ಯ ಮಾಡಲಿದ್ದಾರೆ.
ಮೇ 30 ರಂದು ಬೆಳಗ್ಗೆ 11 ಗಂಟೆಗೆ ಉಡುಪಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Leave a Reply

Your email address will not be published. Required fields are marked *